ಕ್ರಿಸ್ ಗೇಲ್ ಸಿಕ್ಸ್ ದಾಖಲೆ ಮುರಿದ ರೋಹಿತ್ ಶರ್ಮಾ!

Date:

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಗುರುವಾರ ( ಏಪ್ರಿಲ್ 20 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಪಡೆ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್‌ಗಳ ಸಾಧಾರಣ ಮೊತ್ತವನ್ನು ಗಳಿಸಿತು. ಮುಂಬೈ ಇಂಡಿಯನ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಬಂದ ರೋಹಿತ್ ಶರ್ಮಾ 30 ಎಸೆತಗಳಲ್ಲಿ 44 ರನ್ ಬಾರಿಸಿದರು.

ರೋಹಿತ್ ಶರ್ಮಾ 3 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿ ಮಿಂಚಿದರು. ಹಾಗೂ ಈ ಇನ್ನಿಂಗ್ಸ್ ಮೂಲಕ ರೋಹಿತ್ ಶರ್ಮಾ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಸಿಕ್ಸ್ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಕ್ರಿಸ್ ಗೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಇದೀಗ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕ್ರಿಸ್ ಗೇಲ್ ಅವರಿಗಿಂತ ಅತಿ ಹೆಚ್ಚು ಸಿಕ್ಸರ್ ಬಾರಿಸುವ ಮೂಲಕ ಆ ದಾಖಲೆಯನ್ನು ಮುರಿದು ಹಾಕಿದ್ದಾರೆ.

 

ರೋಹಿತ್ ಶರ್ಮಾ ಇದುವರೆಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಗಳಲ್ಲಿ ಒಟ್ಟು 39 ಸಿಕ್ಸರ್ ಸಿಡಿಸಿ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಕ್ರಿಸ್ ಗೇಲ್ ಇದುವರೆಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆಡಿರುವ ಒಟ್ಟು ಪಂದ್ಯಗಳಲ್ಲಿ 37 ಸಿಕ್ಸರ್ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಹೊರತುಪಡಿಸಿ ಉಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶೇನ್ ವಾಟ್ಸನ್ 32, ಯುವರಾಜ್ ಸಿಂಗ್ 32 ಹಾಗೂ ಎಂಎಸ್ ಧೋನಿ 30 ಸಿಕ್ಸರ್ ಬಾರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...