ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

By
1 Min Read

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಸಂಪ್ಯದಲ್ಲಿನಡೆದಿದೆ. ನಿಶಾ (17) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು,
ಕಳೆದ ಒಂದು ವಾರದ ಹಿಂದೆ ವಿಷ ಸೇವಿಸಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿದ್ದು, ನಿಶಾ ರನ್ನಿಂಗ್ ರೇಸ್ನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬಹುಮಾನ ಸಿಗದಿದ್ದಕ್ಕೆ ನಿಶಾ ಬೇಸರಗೊಂಡಿದ್ದಾಳೆ. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದು, ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.

Share This Article