ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ: ಗೃಹಸಚಿವ ಅಮಿತ್ ಶಾ
ನವದೆಹಲಿ: ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ ಎಂದು ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ.
ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಪತ್ರೀಕಾರವಾಗಿ ಇಂದು ತಡರಾತ್ರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಸೇನಾಯು ಪಾಕಿಸ್ತಾನದ ೯ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.