ಕ್ವಾರೆಂಟೀನ್ ಆರಂಭಿಸಿದ ರೋಹಿತ್ ಶರ್ಮಾ

Date:

ಆಸ್ಟ್ರೇಲಿಯಾ ತಲುಪಿರುವ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 14 ದಿನಗಳ ಕ್ವಾರಂಟೈನ್ ಆರಂಭಿಸಿದ್ದಾರೆ. ಡಿಸೆಂಬರ್ 17ರಿಂದ ಶರ್ಮಾ ಕ್ವಾರಂಟೈನ್ ಶುರುವಾಗಿದೆ. ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭಗೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ ವೇಳೆ ಹ್ಯಾಮ್‌ಸ್ಟ್ರಿಂಗ್‌ಗೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಐಪಿಎಲ್ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರಲಿಲ್ಲ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ರೋಹಿತ್ ಚೇತರಿಸಿಕೊಳ್ಳುತ್ತಿದ್ದರು.
ಡಿಸೆಂಬರ್‌ 15ರಂದು ದುಬೈ ಮೂಲಕ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದ್ದ ರೋಹಿತ್, ಡಿಸೆಂಬರ್ 16ರಂದು ಸಿಡ್ನಿ ತಲುಪಿದ್ದರು. ಮರುದಿನದಿಂದ ಶರ್ಮಾ ಅವರ ಕ್ವಾರಂಟೈನ್ ಶುರುವಾಗಿದೆ. ಮೂರನೇ ಟೆಸ್ಟ್‌ ವೇಳೆಗೆ ಶರ್ಮಾ ಕ್ವಾರಂಟೈನ್ ಅವಧಿ ಪೂರ್ಣಗೊಳ್ಳಲಿದೆ.
ಆಸ್ಟ್ರೇಲಿಯಾಕ್ಕೆ ಪ್ರವಾಸ ಬಂದಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರಿಂದ ಸೋಲು, ಟಿ20ಐ ಸರಣಿಯಲ್ಲಿ 2-1ರ ಗೆಲುವು ಕಂಡಿತ್ತು. ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿ ಕುತೂಹಲ ಮೂಡಿಸಿದೆ. ಇತ್ತಂಡಗಳ ಮಧ್ಯೆ ಈಗಾಗಲೇ ಆರಂಭಿಕ ಪಂದ್ಯವಾಗಿ ಪಿಂಕ್‌ಬಾಲ್ ಟೆಸ್ಟ್ ನಡೆಯುತ್ತಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳಲು ಇಚ್ಛಿಸಿದ ರೋರಿಂಗ್ ಸ್ಟಾರ್ ಹೇಳಿದ್ದೇನು?

ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ಶ್ರೀಮುರಳಿ ಈಗ ಜನ್ಮದಿನದ ಸಂಭ್ರಮ. ಹೌದು, ಡಿ.17ರಂದು ಅವರು ಜನ್ಮದಿನ. ಪ್ರತಿ ಬಾರಿ ಆ ದಿನ ಅವರು ಫ್ಯಾನ್ಸ್ ಜೊತೆ ಸೇರಿ ಸಂಭ್ರಮಿಸುತ್ತಿದ್ದರು. ಆದರೆ, ಈ ಬಾರಿ ಅದು ಸಾಧ್ಯವಾಗುತ್ತಿಲ್ಲ. ಕಾರಣ, ಕೊರೊನಾ! ಈ ವರ್ಷ ಅನೇಕ ಸೆಲೆಬ್ರಿಟಿಗಳು ತಮ್ಮ ಬರ್ತ್ ಡೇ ಆಚರಣೆಯನ್ನು ರದ್ದು ಮಾಡಿದ್ದರು. ಆ ಸಾಲಿಗೆ ಈಗ ನಟ ಶ್ರೀಮುರಳಿ ಕೂಡ ಸೇರಿಕೊಂಡಿದ್ದಾರೆ. ಅವರು ಕೂಡ ಈ ಬಾರಿ ಜನ್ಮದಿನ ಆಚರಣೆ ಬೇಡ ಎಂದಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ‘ಈ ಬಾರಿ ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುವುದಿಲ್ಲ. ಕಾರಣ, COVID! ನಮ್ಮಿಂದ ಬೇರೆ ಯಾರಿಗೂ ಅನಾನುಕೂಲತೆಗಳು ಆಗುವುದು ಬೇಡ. ನಾನು ಕಾರಣಾಂತರಗಳಿಂದ ಮನೆಯಲ್ಲಿ ಇರುವುದಿಲ್ಲ. ಯಾರು ಸಹಿತ ಮನೆ ಹತ್ತಿರ ಬಂದು ಬೇಸರ ಪಟ್ಟುಕೊಳ್ಳಬೇಡಿ. ಯಾವುದೇ ಹಾರ, ಕೇಕ್, ಗಿಫ್ಟ್‌ಗಳಿಗೆ ಹಣ ಖರ್ಚು ಮಾಡಬೇಡಿ. ಬದಲಾಗಿ ಹಸಿವಿರುವವರಿಗೆ ಕೈಯಲ್ಲಿ ಆದಷ್ಟು ಅನ್ನದಾನವನ್ನು ಮಾಡಿ ಎಂದು ಕೋರಿಕೊಳ್ಳುತ್ತೀನಿ. ನಮ್ಮ ಎಲ್ಲಾ ಸಂಘದ ಚಿನ್ನಗಳಿಗೆ ಈ ಮೂಲಕ ನಾನು ತಿಳಿಸುತ್ತಿದ್ದೀನಿ’ ಎಂದು ಶ್ರೀಮುರಳಿ ಹೇಳಿದ್ದಾರೆ.
ನಿಮ್ಮನ್ನು ನೊಡೋಕೆ ಆಗದೇ ಇರುವುದಕ್ಕೆ ಬೇಸರ ನನಗೂ ಇದೆ. ಹಾಗಾಗಿ ಅಭಿಮಾನಿ ದೇವರುಗಳೇ, ಆದಷ್ಟು ಬೇಗ ಎಲ್ಲವೂ ಸುಧಾರಿಸಿಕೊಂಡ ನಂತರ ಸಿಗೋಣ! ನಿಮ್ಮ ಪ್ರೀತಿ, ಅಕ್ಕರೆಯನ್ನು ನಾನು ತಿರಸ್ಕರಿಸುವುದಿಲ್ಲ. ನಿಮ್ಮ ಅಭಿಮಾನ, ಪ್ರೀತಿ, ಹಾರೈಕೆ ನನಗೆ ಇಂದು, ಎಂದೆಂದೂ ಬೇಕು. ಅದಕ್ಕೆ ನೀವು ಮಾಡಬೇಕಾಗಿರುವುದು ಏನೆಂದರೆ, ನೀವು ಇರುವ ಕಡೆಯಿಂದಲೇ ನನ್ನನ್ನು ಹಾರೈಸಿ, ಆಶೀರ್ವದಿಸಿ. ಅದೇ ನೀವು ನನಗೆ ಹುಟ್ಟು ಹಬ್ಬದಂದು ಕೊಡುವ ಬಹುದೊಡ್ಡ ಕಾಣಿಕೆ’ ಎಂದು ಶ್ರೀಮುರಳಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...