ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ ಅಂತಿದಾರೆ ಉಮಾಶ್ರೀ!

Date:

ಮಾತಿನಮನೆಯಲ್ಲಿ‌ “ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ”.

ಜನಪ್ರಿಯ ತಾರಾಜೋಡಿ ದಿಗಂತ್ ಹಾಗೂ ಐಂದ್ರಿತ ರೇ ನಾಯಕ – ನಾಯಕಿಯಾಗಿ ನಟಿಸಿರುವ “ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರಕ್ಕೆ ಪ್ರಜ್ವಲ್ ಪೈ ಅವರ‌ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಈಗಾಗಲೇ ಚಿತ್ರೀಕರಣ ಪೂರ್ಣವಾಗಿದ್ದು, ಸಾಗರ, ಸಿಗಂಧೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.
ಉ ತಾನೆ  ಉಮಾಶ್ರೀ ಅವರ  ಡಬ್ಬಿಂಗ್ ಮುಗಿದಿದೆ, ಉಪ್ಪಿ  ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪತ್ರಕರ್ತ ವಿನಾಯಕ ಕೋಡ್ಸರ ಈ ಚಿತ್ರ ನಿರ್ದೇಶಿಸಿದ್ದಾರೆ.‌ ಕೆಲವು ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ವಿನಾಯಕ ಕೋಡ್ಸರ ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ.


ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ‌ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.
ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ದಿಗಂತ್ ಐಂದ್ರಿತಾ ರೇ, ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಘವನ್, ಕಾಸರಾಗೋಡು ಚಿನ್ನ, ಪಿ.ಡಿ.ಸತೀಶ್‌ ಹಾಗೂ ನೀನಾಸಂನ ಹಲವು ಕಲಾವಿದರು ‌ಭಾಗವಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...