ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

Date:

ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‘ಬಹಳ ಸಂತೋಷ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾ ಪ್ರತಿಕ್ರಿಯೆ ನೀಡಿದರು.ಇನ್ನು ಸಿಎಂ ಅವರ ಲೇಖನ ಹಾಗೂ ಟ್ವಿಟರ್ ಪೋಸ್ಟ್ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದರು.
ಬಾಗಲಕೋಟೆ ಗಲಭೆ ಬಗ್ಗೆ ಕೇಳಿದಾಗ, “ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದು ಹೇಳಿದರು.
ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು, ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ” ಎಂದರು.ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ನಾನು ಒಂದು ರೂ. ಅನುದಾನ ಕೇಳಿಲ್ಲ ಎಂಬ ಶಾಸಕ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಮುಂದೆ ಮಾತನಾಡೋಣ” ಎಂದರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...