Home ಎಲ್ಲೆಲ್ಲಿ ಏನೇನು.? ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

0
ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಘಟನೆ ಸಂಭವಿಸಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ನೋವು ವ್ಯಕ್ತಪಡಿಸಿದ್ದಾರೆ.

ಅದಲ್ಲದೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಚಿವ ಖಂಡ್ರೆ ಆದೇಶಿಸಿದ್ದು, ಅರಣ್ಯ ಅಧಿಕಾರಿಗಳು ಕರ್ತವ್ಯ ಲೋಪ ಮಾಡಿದ್ದಾರೆಯೇ ಎಂಬುದರ ಕುರಿತು 5 ದಿನಗಳೊಳಗೆ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳ ಚಲನವಲನ ಕಂಡುಬಂದಿದ್ದರೂ, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾರಣವೇ ಈ ದುರ್ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಸಚಿವ ಖಂಡ್ರೆ ಅವರು, ಬೇಲಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.