ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

Date:

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದ ನೆಹರೂ ತಾರಾಲಯದ ಬಳಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಯುವಕರು ಧೈರ್ಯವಾಗಿರಿ. ನಿಮ್ಮ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೊಳ್ಳಲಿದೆ. ಶೀಘ್ರದಲ್ಲೇ ಸ್ಪಷ್ಟ ಸಂದೇಶ ನೀಡುತ್ತೇವೆ. ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಿದ್ದೇವೆ, ಮುಂದೆಯೂ ಮಾಡುತ್ತೇವೆ. ಇದಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿ ಯುವಕರು ನಡೆಸುತ್ತಿರುವ ಪ್ರತಿಭಟನೆ ಕುರಿತು ಕೇಳಿದಾಗ, “ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಲಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳೂ ನಡೆದವು. ಯುವಕರ ನೋವು ನಮಗೆ ಅರ್ಥವಾಗಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ” ಎಂದು ಹೇಳಿದರು.

“ಹುದ್ದೆಗಳ ಭರ್ತಿಗೆ ಸಮಗ್ರ ಯೋಜನೆ ರೂಪಿಸಲಾಗಿದೆ. ಕೆಪಿಎಸ್‌ಸಿ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ನೇಮಕಾತಿ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಒಳಮೀಸಲಾತಿ ವಿಚಾರದಲ್ಲಿ ಕೆಲವು ತಾಂತ್ರಿಕ ಅಡಚಣೆಗಳಿವೆ. ನಿರುದ್ಯೋಗಿ ಯುವಕರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ‘ಯುವನಿಧಿ’ ಯೋಜನೆ ಜಾರಿಗೆ ತಂದಿದ್ದೇವೆ” ಎಂದು ಶಿವಕುಮಾರ್ ಹೇಳಿದರು.

Share post:

Subscribe

spot_imgspot_img

Popular

More like this
Related

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...