ಖಾಸಗಿ ಆಸ್ಪತ್ರೆ ಲಸಿಕೆ ಸಮಸ್ಯೆ

Date:

ಖಾಸಗಿ ಆಸ್ಪತ್ರೆಗಳು ನೇರವಾಗಿ ಕೊರೊನಾ ಲಸಿಕೆಗಳನ್ನು ಸರ್ಕಾರದಿಂದ ಖರೀದಿಸುವಂತಿಲ್ಲ, ಕೋವಿಡ್ ಅಪ್ಲಿಕೇಷನ್ ಮೂಲಕವೇ ಆರ್ಡರ್ ಬುಕ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ಅನುಗುಣವಾಗಿ ಲಸಿಕೆ ಪೂರೈಸಲಾಗುತ್ತದೆ. ಹೀಗಾಗಲೇ ಮೊದಲೇ ಕೋವಿಡ್ ಅಪ್ಲಿಕೇಷನ್‌ ಅಲ್ಲಿ ಎಷ್ಟು ಲಸಿಕೆ ಬೇಕೆಂಬುದನ್ನು ಸ್ಪಷ್ಟಪಡಿಸಿದರೆ ಆ ಸಂಖ್ಯೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.


ಎನ್‌ಎಚ್‌ಎ ಪೋರ್ಟಲ್ ಮೂಲಕ ವಿದ್ಯುನ್ಮಾನವಾಗಿ ಹಣ ಪಾವತಿಸಿದ ನಂತರ ಈ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲು ಕೇಂದ್ರ ಆರೋಗ್ಯ ಸಚಿವಾಲಯ ಅನುಕೂಲ ಮಾಡುತ್ತದೆ. ಈ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ಲಸಿಕೆಗಳ ಖರೀದಿ ಮತ್ತು ಪೂರೈಕೆಗಾಗಿ ಆಸ್ಪತ್ರೆಗಳು ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಈ ಕೆಳಗಿನ ಪರಿಷ್ಕರಣೆಗಳು ಜುಲೈ 1 ರಿಂದ ಜಾರಿಗೆ ಬರಲಿವೆ.
ಜುಲೈ 1 ರಿಂದ ದೇಶದ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-19 ಲಸಿಕೆಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಪೋರ್ಟಲ್‌ನಲ್ಲಿ ಲಸಿಕೆಗಾಗಿ ಆರ್ಡರ್ ಮಾಡಿ ಲಸಿಕೆಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದೆ.


ಲಸಿಕೆಗಾಗಿ ಸರ್ಕಾರದಿಂದ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿರುವ ಆರೋಗ್ಯ ಸಚಿವಾಲಯ ಸರ್ಕಾರಿ ಪೋರ್ಟಲ್‌ನಲ್ಲಿ ಖರೀದಿ ಆದೇಶಗಳನ್ನು ಯಶಸ್ವಿಯಾಗಿ ಸಲ್ಲಿಸಿದರೆ ಸಾಕು ಎಂದು ಸ್ಪಷ್ಟನೆ ನೀಡಿದೆ.
ಆರ್ಡರ್ ಬುಕ್ ಮಾಡಿದ ಮೂರು ದಿನಗಳಲ್ಲಿ ಪಾವತಿ ಮಾಡಬೇಕು, ಎಲೆಕ್ಟ್ರಾನಿಕ್ ಅಥವಾ ಡಿಜಿಟಲ್ ಮೋಡ್ ಮೂಲಕ ಮಾತ್ರ ಪಾವತಿ ಸ್ವೀಕರಿಸಲಾಗುತ್ತದೆ, ಎಸ್‌ಒಪಿ ನಿರ್ದಿಷ್ಟಪಡಿಸುತ್ತದೆ. ಪಿಸಿವಿಸಿಗಳು ಕೋವಿಶೀಲ್ಡ್ ಅಥವಾ ಕೊವಾಕ್ಸಿನ್‌ಗೆ ನಾಲ್ಕು ಕಂತುಗಳವರೆಗೆ ಆರ್ಡರ್ ಬುಕ್ ಮಾಡಬಹುದು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...