ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ !

Date:

ಬೆಂಗಳೂರು: ಮತ್ತೊಂದು ವಿವಾದಿತ ಆದೇಶ ರಾಜ್ಯ ಸರ್ಕಾರ ಹೊರಡಿಸಿದೆ. ಹೌದು ಇನ್ನು ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.


ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ – ವಿಜಯೇಂದ್ರ ಟೀಕೆ

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ –...

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...