ಖಾಸಗಿ ಶಾಲೆಗಳಿಗೆ ನಾಡಗೀತೆ ವಿನಾಯ್ತಿ ಆದೇಶ ವಿವಾದ !

Date:

ಬೆಂಗಳೂರು: ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲಾ ಶಾಲೆಗಳು ಒಂದೇ. ಆದೇಶ ಮಾಡಬೇಕಾದ್ರೆ ಸರ್ಕಾರಿ ಶಾಲೆ, ಅನುದಾನಿತ‌ ಶಾಲೆ ಎಂದು ಹಾಕಿದ್ದಾರೆ ಎಂದು ಖಾಸಗಿ ಶಾಲೆಗಳಿಗೆ ನಾಡಗೀತೆ ವಿನಾಯ್ತಿ ಆದೇಶ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,
ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲಾ ಶಾಲೆಗಳು ಒಂದೇ. ಆದೇಶ ಮಾಡಬೇಕಾದ್ರೆ ಸರ್ಕಾರಿ ಶಾಲೆ, ಅನುದಾನಿತ‌ ಶಾಲೆ ಎಂದು ಹಾಕಿದ್ದಾರೆ. ಅದನ್ನು‌ ಬದಲಾವಣೆ ಮಾಡಿ ಎಲ್ಲಾ ಶಾಲೆಗಳು ಎಂದು ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ತಿಳಿಸಿದರು. ನಮ್ಮ ಸರ್ಕಾರ ಕನ್ನಡ ಬಗ್ಗೆ ಕಾಳಜಿ ಇಟ್ಟಿದೆ. ಈ ವಿಚಾರವಾಗಿ ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ ಬಾಧಕ ಹೇಳಬೇಕು. ಮಾಧ್ಯಮ ಮಿತ್ರರಿಗೆ ಇದರ ಬಗ್ಗೆ ತಿಳಿಸಬೇಕು ಅಂತಾನೇ ಬಂದೆ. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದರು.

ಶೇಕಡ 60 ಪರ್ಸೆಂಟ್ ಕನ್ನಡ ಫಲಕ ಹಾಕುವ ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿ, ವಿಧಾನ ಸಭೆ, ಪರಿಷತ್ ಅಲ್ಲಿ ಚರ್ಚೆ ಆಗಿದೆ. ಕನ್ನಡದಲ್ಲಿ ಬೋರ್ಡ್ ಹಾಕಬೇಕು ಎಂದು ಚರ್ಚೆ ಆಗಿದೆ. ನಾನು ವಿಚಾರ ಮಾಡುತ್ತೇನೆ. ಕೆಲವರು ಸಲಹೆ ಕೊಟ್ಟಿದ್ದಾರೆ. ಕೈಗಾರಿಕೆಗಳಲ್ಲಿ ಹೆಸರು ಹಾಕುವ ಡಿಸ್ಪ್ಲೇ ಹಾಕುವ ಪದ್ದತಿ ಬರುತ್ತಿದೆ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...