No menu items!
5.3 C
Munich
Wednesday, September 23, 2026

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

Must read

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವಯೋಸಹಜ ಆರೋಗ್ಯ ಸಮಸ್ಯೆಗಳೂ ಅವರಿಗೆ ಇದ್ದವು ಎಂದು ತಿಳಿದುಬಂದಿದೆ.
ಹಿಂದಿ ಸೇರಿದಂತೆ ಕನ್ನಡ ಸೇರಿ 20ಕ್ಕೂ ಹೆಚ್ಚು ಭಾಷೆಗಳಲ್ಲಿ 12 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಅವರು ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಪಾಪ್, ಗಜಲ್ ಹಾಗೂ ಶಾಸ್ತ್ರೀಯ ಸಂಗೀತ ಕ್ಷೇತ್ರಗಳಲ್ಲಿಯೂ ಅವರು ವಿಶಿಷ್ಟ ಗುರುತು ಮೂಡಿಸಿದ್ದರು.
ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article