ಖ್ಯಾತ ನಟಿ ಜೊತೆ ಅನುಷ್ಕಾ ಸಹೋದರ ಲವ್ವಿ ಡವ್ವಿ!

Date:

ಬಾಲಿವುಡ್ ಖ್ಯಾತ ನಟಿ ಅನುಷ್ಕಾ ಶರ್ಮಾ ಸಹೋದರ ಕರ್ನೇಶ್ ಶರ್ಮಾ ಖ್ಯಾತ ನಟಿ ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಅನುಷ್ಕಾ ಸಹೋದರ ಡೇಟಿಂಗ್ ಮಾಡುತ್ತಿರುವ ನಟಿ ಮತ್ಯಾರು ಅಲ್ಲ ತೃಪ್ತಿ ಡಿಮ್ರಿ. ಅನುಷ್ಕಾ ಶರ್ಮಾ ನಿರ್ಮಾಣದ ಬುಲ್ ಬುಲ್ ನಲ್ಲಿ ನಟಿಸಿದ್ದ ತೃಪ್ತಿ ಡಿಮ್ರಿ, ಕರ್ನೇಶ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರಂತೆ. ಕಳೆದ ವರ್ಷ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಿದ್ದ ಅನುಷ್ಕಾ ನಿರ್ಮಾಣದ ಬುಲ್ ಬುಲ್ ಚಿತ್ರದಲ್ಲಿ ನಟಿಸುವ ಮೂಲಕ ತೃಪ್ತಿ ಮೊದಲ ಬಾರಿಗೆ ಒಟಿಟಿಗೆ ಎಂಟ್ರಿ ಕೊಟ್ಟಿದ್ದರು.

ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಕರ್ನೇಶ್ ಶರ್ಮಾ ಮತ್ತು ತೃಪ್ತಿ ಇಬ್ಬರು ಬುಲ್ ಬುಲ್ ಸೆಟ್ ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಶೀಘ್ರದಲ್ಲೇ ಇಬ್ಬರ ನಡುವೆ ಉತ್ತಮ ಸ್ನೇಹ ಬೆಳೆದಿದೆ. ಸಿನಿಮಾ ಮುಗಿದ ಬಳಿಕವೂ ಇಬ್ಬರ ನಡುವೆ ಅದೇ ಸ್ನೇಹ ಮುಂದುವರೆದಿದೆ.

ಇಬ್ಬರ ನಡುವೆ ವದಂತಿ ಹರಿದಾಡುತ್ತಿದ್ದರೂ ಈ ಬಗ್ಗೆ ಮೌನ ಮುರಿದಿಲ್ಲ. ಇತ್ತೀಚಿಗಷ್ಟೆ ಅನುಷ್ಕಾ ಶರ್ಮಾ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಕರ್ನೇಶ್ ಮತ್ತು ತೃಪ್ತಿ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋ ಇಬ್ಬರ ನಡುವಿನ ವದಂತಿಗೆ ಮತ್ತಷ್ಟು ಪುಷ್ಟಿನೀಡಿದೆ. 2018ರಲ್ಲಿ ಸಿನಿಮಾರಂಗ ಪ್ರವೇಶ ಮಾಡಿದ ನಟಿ ತೃಪ್ತಿ ಡಿಮ್ರಿ, ಲೈಲಾ ಮಜ್ನು ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅವಿನಾಶ್ ತಿವಾರಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ತೃಪ್ತಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಣಬೀರ್ ಕಪೂರ್ ನಟನೆಯ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...