No menu items!
23.4 C
Munich
Saturday, May 2, 2026

ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ !

Must read

ಬೆಂಗಳೂರು : ಇದು ನಿಜಕ್ಕೂ ಶಾಕಿಂಗ್ ಸುದ್ದಿ. ಖ್ಯಾತ ನಿರೂಪಕಿ ಅಪರ್ಣ(51) ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅವರು ಕ್ಯಾನ್ಸರ್ ನಿಂದ ಬಳಳುತ್ತಿದ್ದರು. ಕನ್ನಡಿಗರ ಮನ-ಮನೆಗಳಲ್ಲಿ‌ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾ ಅತೀ ಚಿಕ್ಕ ವಯಸ್ಸಿನಲ್ಲೆ ಖ್ಯಾತ ನಿರೂಪಕಿಯಾಗಿ ಗುರುತಿಸಿಕೊಂಡಿದ್ದರು. ಅವರ ಬನಶಂಕರಿ ನಿವಾಸದಲ್ಲಿ ಅಪರ್ಣ ಕೊನೆಯುಸಿರೆಳೆದಿದ್ದಾರೆ. ಚಂದನ ವಾಹಿನಿ ಸೇರಿದಂತೆ ಅನೇಕ ಕಡೆಗಳಲ್ಲಿ ನಿರೂಪಣೆಯ ಮೂಲಕ ತಮ್ಮ ಛಾಪನ್ನ ಮೂಡಿಸಿದ್ದರು. ಮಜಾ ಟಾಕೀಸ್ ಮೂಲಕ ವಿಭಿನ್ನ ರೀತಿಯಲ್ಲಿ ವರ ಲಕ್ಷ್ಮೀಯಾಗಿ ಮಿಂಚಿದ್ದ ವರು ಈಗ ನೆನಪು ಮಾತ್ರ.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು.2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದರು.ಅಪರ್ಣ ತಂದೆಯವರು ಕನ್ನಡಪ್ರಭದಲ್ಲಿ ಕಾರ್ಯ ನಿರ್ವಹಿಸಿದ್ದರು.

- Advertisement -spot_img

More articles

- Advertisement -spot_img

Latest article