ಖ್ಯಾತ ಸಾಹಿತಿ ನಾಡೋಜ
ಕಮಲ ಹಂಪನಾ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿ ಎಂದೆ ಗುರುತಿಸಲ್ಪಟ್ಟಿದ್ದರು ನಾಡೋಜ ಕಮಲ ಹಂಪನಾ .
ಕಮಲಾ ಹಂಪನಾ ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಅವರು, ಬಂದು ಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ ಕಮಲಾ.
ಇನ್ನೂ ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ಮಾಹಿತಿ ನೀಡಿದ್ದಾರೆ.