ಖ್ಯಾತ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ!
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಜನವರಿ 12ರಂದೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗ್ತಿದೆ. ಹೀಗಿದ್ದರೂ ಜನವರಿ 12ರಂದು ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಹೊರಬಂದಿತ್ತು. ಈಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಮಗ ರೋಹಿತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಆದರೆ ಇಂದು ಅವರು ಮೃತಪಟ್ಟಿರುವ ಸುದ್ದಿ ಬಂದಿದೆ.