ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ IPS ಅಧಿಕಾರಿ

Date:

ಬೆಂಗಳೂರು: ಐಪಿಎಸ್ ಅಧಿಕಾರಿ ವರ್ಟಿಕಾ ಕಟಿಯಾರ್ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ವರ್ಟಿಕಾ ಕಟಿಯಾರ್ ನಗರದ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿ ಕೆಲಸ ಮಾಡುತ್ತಿದ್ದಾರೆ. ಕಟಿಯಾರ್ ಗಂಡ ನಿತಿನ್ ಸುಭಾಶ್ ಯೋಲ ವಿರುದ್ಧ ವಿಧಾನ ಸೌದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವರ್ಟಿಕಾ ಕಟಿಯಾರ್ ಈ ಹಿಂದೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿತಿನ್ ಹಾಗೂ ಕಟಿಯಾರ್ ದಾಂಪತ್ಯದಲ್ಲಿ ಬಿರುಕು ಕಂಡ ಹಿನ್ನಲೆ 2020ರಲ್ಲಿ ವಿಚ್ಚೇದನ ಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚ್ಚೇದನದ ಅರ್ಜಿ ವಿಚಾರಣಾ ಹಂತದಲ್ಲಿದೆ.

ನಿತಿನ್ ತಾಯಿ ಮಗನೊಂದಿಗೆ ವಾಟ್ಸಪ್ ಕಾಲ್ ನಲ್ಲಿರುವಾಗ ಆಸಿಡ್ ಹಾಕುತ್ತೇನೆ ಅಥವಾ ಬೇರೆಯವರಿಂದ ಆಸಿಡ್ ಹಾಕಿಸೊದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಜೊತೆಗೆ ಮೇ 29 ರಂದು ಲಾಕ್‍ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಹಲ್ಲೆಗೆ ಸಂಚು ಆರೋಪಿಸಿದ್ದಾರೆಂದು ಆರೋಪಿಸಿ ವರ್ಟಿಕಾ ದೂರು ವಿಧಾನಸೌದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಹಿಂದೆ ನೀಡಿದ ಪ್ರಕರಣದ ತನಿಖೆ ದೆಹಲಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿತ್ತು. ಈ ನಡುವೆ ಮಗು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ ಮೊರೆಹೋಗಿದ್ದ ಪತಿ ನಿತಿನ್ ಪ್ರಾಥಮಿಕ ವಿಚಾರಣೆ ನಡೆಸಿ ಡಿಜಿಪಿ ಪ್ರವೀಣ್ ಸೂದ್‍ಗೆ ವರ್ಟಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...