ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ !

0
52

ಚಿಕ್ಕಮಗಳೂರು: ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ. ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತನ್ನ ವಿರುದ್ಧ ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಕ್ಕ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ. ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ. ವ್ಯವಸ್ಥಿತವಾಗಿ ದುಡ್ಡಿನ ಅಹಂಕಾರದಿಂದ ಈ ರೀತಿ ಮಾಡ್ತಿದ್ದಾರೆ. ಷಡ್ಯಂತ್ರಕ್ಕೆ ಉತ್ತರ ನಾನು ಕೊಡಲ್ಲ, ನಮ್ಮ ನಾಯಕರು, ದೊಡ್ಡವರು ಕೊಡ್ತಾರೆ. ಯಾರು ಬರೆದರೂ, ಬರೆಸಿದವರು ಯಾರು, ಯಾವ ಹ್ಯಾಂಡ್ ರೈಟಿಂಗ್ ಬರೆದರು ಎಲ್ಲಾ ಗೊತ್ತಿದೆ. ನನ್ನ ಹಿರಿಯರ ಮೇಲೆ ನಂಬಿಕೆ ಇದೆ, ಅವರು ಉತ್ತರ ನೀಡುತ್ತಾರೆ. ಕೇಂದ್ರ ಕೂಡ ಎಲ್ಲಾ ವರದಿ ತರೆಸಿಕೊಂಡಿದೆ ಎಂದರು.