ಗಂಡು ಮಗುವಿಗೆ ಜನ್ಮ ಕೊಟ್ಟ ನಿಖಿಲ್ ಪತ್ನಿ ರೇವತಿ

Date:

ಕನ್ನಡದ ಯುವ ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

 

ಖಾಸಗಿ ಆಸ್ಪತ್ರೆಯಲ್ಲಿ ರೇವತಿ ನಿಖಿಲ್ ಕುಮಾರ್ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಮಗ ನಿಖಿಲ್ ಕುಮಾರ್‌ ದಂಪತಿಗೆ ಗಂಡು ಮಗು ಆಗಿರುವ ಹಿನ್ನೆಲೆ ಮಾಜಿ ಸಿಎಂ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ.

ತಾತನಾದ ಕುರಿತು ಎಚ್‌ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ”ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.” ಎಂದು ಪೋಸ್ಟ್ ಹಾಕಿದ್ದಾರೆ.

 

ಎರಡು ವಾರಗಳ ಹಿಂದೆಯಷ್ಟೇ ರೇವತಿ ನಿಖಿಲ್ ಕುಮಾರ್ ಅವರ ಸೀಮಂತ ಕಾರ್ಯಕ್ರಮ ನಡೆದಿತ್ತು. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಮಾನ್ವಿ ಕನ್ವೆಂಷನ್ ಸೆಂಟರ್‌ನಲ್ಲಿ ಎಚ್‌ಡಿ ಕುಮಾರಸ್ವಾಮಿ ಸೊಸೆಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕುಟುಂಬ ಸಂಬಂಧಿಕರು, ಆಪ್ತರು ಮತ್ತು ಗೆಳಯರಷ್ಟೇ ಭಾಗಿಯಾಗಿದ್ದರು.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...