ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ: ಇಂದು ಮದ್ದೂರು ಬಂದ್
ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಮದ್ದೂರು ಬಂದ್ ಮಾಡಲಾಗಿದೆ. ಹಿಂದುಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಿಜೆಪಿ ಸಹ ಬೆಂಬಲ ನೀಡಿದೆ.
ಮದ್ದೂರಿನ ಕೆಎಂ ದೊಡ್ಡಿ, ಬೆಸಗರಹಳ್ಳಿ, ಕೆಸ್ತೂರು ಸೇರಿದಂತೆ ಹಲವಾರು ಹೋಬಳಿ ಕೇಂದ್ರಗಳಲ್ಲೂ ಬಂದ್ ಜಾರಿಯಲ್ಲಿದೆ.
ಇದೇ ವೇಳೆ ಪಟ್ಟಣದಲ್ಲಿ ಇಂದು ಭಾರೀ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಸಾವಿರಾರು ಹಿಂದು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಲಿದ್ದು, ಪೇಟೆ ಬೀದಿ ಮೂಲಕ ಐಬಿ ವೃತ್ತದವರೆಗೆ ರ್ಯಾಲಿ ಸಾಗಲಿದೆ.
ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದಲೂ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.