ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ!

Date:

ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ!

ಗದಗ: 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ, ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಸೇರಿದ ಆಸ್ಪತ್ರೆ ಎಂದು ತಿಳಿದುಬಂದಿದ್ದು, ಇದೇ ಸ್ಥಳದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 11 ಲಕ್ಷ ರೂಪಾಯಿ ಲಂಚಕ್ಕೆ ಒಪ್ಪಂದವಾಗಿತ್ತು ಎಂದು ಹೇಳಲಾಗಿದೆ. ಗುತ್ತಿಗೆದಾರ ವಿಜಯ ಪೂಜಾರರಿಂದ ಇಂದು 5 ಲಕ್ಷ ರೂಪಾಯಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.

ಶಾಸಕರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಾವಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್ ಬೆಂಗಳೂರು: ನಾಯಕತ್ವ...

ಮಹಿಳಾ ಅಧಿಕಾರಿ ಮನೆಯಲ್ಲಿ ಕ್ಯಾಮೆರಾ ಪ್ರಕರಣ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಮಹಿಳಾ ಅಧಿಕಾರಿ ಮನೆಯಲ್ಲಿ ಕ್ಯಾಮೆರಾ ಪ್ರಕರಣ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ...

ಕಾಂಗ್ರೆಸ್ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ಸಿಗರ ರಕ್ತದಲ್ಲೇ...

ಪ್ರತಿದಿನ ಬೆಳಗ್ಗೆ ನೆನೆಸಿದ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.?

ಪ್ರತಿದಿನ ಬೆಳಗ್ಗೆ ನೆನೆಸಿದ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.? ಪ್ರತಿದಿನ...