No menu items!
30.2 C
Munich
Thursday, July 16, 2026

ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ!

Must read

ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ!

ಗದಗ: 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ, ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಸೇರಿದ ಆಸ್ಪತ್ರೆ ಎಂದು ತಿಳಿದುಬಂದಿದ್ದು, ಇದೇ ಸ್ಥಳದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 11 ಲಕ್ಷ ರೂಪಾಯಿ ಲಂಚಕ್ಕೆ ಒಪ್ಪಂದವಾಗಿತ್ತು ಎಂದು ಹೇಳಲಾಗಿದೆ. ಗುತ್ತಿಗೆದಾರ ವಿಜಯ ಪೂಜಾರರಿಂದ ಇಂದು 5 ಲಕ್ಷ ರೂಪಾಯಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.

ಶಾಸಕರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಾವಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article