ಗರ್ಭಗುಡಿಯಲ್ಲಿ ಆರ್‌ಸಿಬಿ ಬಾವುಟ ; ರಾಯಲ್ ಫ್ಯಾನ್ಸ್ ಕ್ರೇಜ್

Date:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇರುವಷ್ಟು ಅಭಿಮಾನಿ ಬಳಗ ಬಹುಷಃ ಬೇರೆ ಯಾವುದೇ ತಂಡಕ್ಕೂ ಇಲ್ಲ ಎನಿಸುತ್ತದೆ. ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲಿಯೂ ಸಹ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು. 13 ಐಪಿಎಲ್ ಆವೃತ್ತಿಗಳು ಮುಗಿದು 14ನೇ ಐಪಿಎಲ್ ಆವೃತ್ತಿ ಆರಂಭವಾಗಿದ್ದು ಇದುವರೆಗೂ ಸಹ ಆರ್‌ಸಿಬಿ ಒಂದೇ ಒಂದು ಐಪಿಎಲ್ ಟ್ರೋಫಿಯನ್ನೂ ಗೆದ್ದಿಲ್ಲ. ಆದರೂ ಸಹ ಅಭಿಮಾನಿಗಳ ಸಂಖ್ಯೆ ಕಿಂಚಿತ್ತೂ ಕಡಿಮೆಯಾಗಿಲ್ಲ.

ಕಪ್ ಗೆಲ್ಲದೇ ಇರುವ ಆರ್‌ಸಿಬಿ ತಂಡಕ್ಕೆ ಇರುವಷ್ಟು ದೊಡ್ಡ ಅಭಿಮಾನಿ ಬಳಗ ಕಪ್ ಗೆದ್ದಿರುವ ತಂಡಗಳಿಗೂ ಇಲ್ಲ ಎಂದರೆ ತಪ್ಪಾಗಲಾರದು. ಪ್ರತಿ ವರ್ಷ ಐಪಿಎಲ್ ಹತ್ತಿರ ಬಂದಾಗ ರಥೋತ್ಸವದಲ್ಲಿ ಹಣ್ಣು ಜವನದ ಮೇಲೆ ಈ ಸಲ ಕಪ್ ನಮ್ದೆ ಎಂದು ಬರಹಗಳನ್ನು ಬರೆದು ದೇವರಿಗೆ ಅರ್ಪಿಸುವ, ವಿವಿಧ ದೇವಾಲಯಗಳಲ್ಲಿ ಆರ್‌ಸಿಬಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ ಮತ್ತು ಅಭಿಷೇಕಗಳನ್ನು ಮಾಡಿಸುವ ಆರ್‌ಸಿಬಿ ಅಭಿಮಾನಿಗಳನ್ನು ನೀವು ಗಮನಿಸಿರಬಹುದು.

 

 

ಇದೀಗ ಅಂತಹದ್ದೇ ಮತ್ತೊಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಯೊಬ್ಬರು ಆರ್‌ಸಿಬಿ ಧ್ವಜವನ್ನು ಗರ್ಭಗುಡಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಫ್ರಾಂಚೈಸಿ ನಡೆಸುವ ಒಂದು ಕ್ರಿಕೆಟ್ ತಂಡಕ್ಕೆ ಇಷ್ಟು ದೊಡ್ಡ ಮಟ್ಟದ ಕ್ರೇಜ್ ಇದೆಯಾ ಎಂದು ಹಲವರು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುತ್ತಿದ್ದಾರೆ. ಏನೇ ಆಗಲಿ ಈ ಥರ ಅಪಾರ ಪ್ರೀತಿ ತೋರಿಸುವ ಅಭಿಮಾನಿ ಬಳಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಟ್ಟರೆ ಬೇರೆ ಯಾವುದೇ ತಂಡಕ್ಕೂ ಇರುವುದಿಲ್ಲ ಬಿಡಿ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...