“ಗಾಂಧಿ ನಡಿ”ಗೆ ಮೂಲಕ ವಿಧಾನಸೌಧಕ್ಕೆ ಬಂದ ಸಿಎಂ, ಡಿಸಿಎಂ

Date:

“ಗಾಂಧಿ ನಡಿ”ಗೆ ಮೂಲಕ ವಿಧಾನಸೌಧಕ್ಕೆ ಬಂದ ಸಿಎಂ, ಡಿಸಿಎಂ

ಬೆಂಗಳೂರು: ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ಸಿಎಂ ಮತ್ತು ಡಿಸಿಎಂ ಕಾಲ್ನಡಿಗೆಯಲ್ಲೇ ವಿಧಾನಸೌಧಕ್ಕೆ ತೆರಳಿದರು.
ಹೌದು ಗಾಂಧಿ ನಡಿಗೆ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರಾದ ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಕಾಲ್ನಡಿಗೆಯಲ್ಲಿ ಸಾಗಿದರು. ಬಳಿಕ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ‘ಕಿತ್ತೂರು ವಿಜಯೋತ್ಸವದ ಜ್ಯೋತಿ’ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿಗಳಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ರಿಜ್ವಾನ್ ಸೇರಿ ಹಲವರು ಸಾಥ್ ನೀಡಿದರು.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...