ಗಾಂಧೀಜಿ ಹೆಸರು ಉಳಿಸಲು ನಿರಂತರ ಹೋರಾಟ ಮಾಡ್ತಾರಂತೆ ವಾಟಾಳ್ !?

Date:

ಸತ್ಯ-ಅಹಿಂಸೆ ಮೂಲಕ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಅವರನ್ನು ಅವಮಾನ ಮಾಡುವಂತಹ ಚಟುವಟಿಕೆಗಳು ಇತ್ತೀಚೆಗೆ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ವಿಶ್ವಮಾನ್ಯ ಬಾಪು ಅವರ ಹೆಸರು ಉಳಿಸಲು ನಿರಂತರ ಹೋರಾಟ ಮಾಡಲಾಗುವುದು ಎಂದು ಹೇಳಿದರು.

1893 ಜೂನ್ 7ರಂದು ದಕ್ಷಿಣ ಆಫ್ರಿಕಾದಲ್ಲಿ ಬಿಳಿಯರು ಗಾಂಧೀಜಿ ಅವರನ್ನು ರೈಲಿನಿಂದ ತಳ್ಳಿ ಅವಮಾನಗೊಳಿಸಿದರು. ಇದನ್ನೇ ಸವಾಲಾಗಿ ಸ್ವೀಕರಿಸಿ ಕರಿಯರ ಪರವಾಗಿ ಹೋರಾಟ ನಡೆಸಿ ಅಲ್ಲಿಂದ ಬಂದು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸ್ವಾಭಿಮಾನಿ ಗಾಂಧೀಜಿ ಅವರ ಪರವಾಗಿ ಟೀಕೆ-ಟಿಪ್ಪಣಿಗಳನ್ನು ಮಾಡುತ್ತಿರುವುದು ಅತ್ಯಂತ ಖಂಡನೀಯವಾಗಿದೆ

ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿ ಎಂಬುವವರು ಪ್ರಪಂಚದಾದ್ಯಂತ ಗಾಂಧೀಜಿ ಅವರ ಪ್ರತಿಮೆಗಳನ್ನು ತೆಗೆಯಬೇಕು ಎಂಬ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ವಜಾ ಮಾಡಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಸಂಸದರೊಬ್ಬರು ಗಾಂಧೀಜಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧವೂ ಕೂಡ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಮಹಾತ್ಮ ಗಾಂಧೀಜಿ ಅವರ ಪ್ರಭಾವ ವಿಶ್ವಮಾನ್ಯಗೊಂಡಿದೆ. ಅಂತಹವರನ್ನು ನಾವು ಆರಾಧಿಸಬೇಕು. ಆದರೆ, ಕೆಲವರು ಅವರನ್ನು ಟೀಕಿಸುವ, ನಿಂದಿಸುವ ಕೆಲಸ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಹೇಳಿದರು.

ಗಾಂಧಿ ಹೆಸರನ್ನು ಉಳಿಸುವುದು, ಭ್ರಷ್ಟಾಚಾರವನ್ನು ಅಳಿಸುವುದು, ಅವರ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಬೇಕು ಎಂದು ವಾಟಾಳ್ ಹೇಳಿದರು.

ಇದೇ ಸಂದರ್ಭದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಳ್ಳಿ ರಥದಲ್ಲಿ ಮಹಾತ್ಮ ಗಾಂಧೀಜಿಯವರ ಆಳೆತ್ತರದ ಭಾವಚಿತ್ರ ಇಟ್ಟು ಪುಷ್ಪನಮನ ಸಲ್ಲಿಸಿ ಕೆಂಪೇಗೌಡ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...