ಗಾನಾ ಕೋಗಿಲೆ ಎಸ್.ಜಾನಕಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು!!

admin
1 Min Read

ಗಾನ ಕೋಗಿಲೆ ಎಸ್. ಜಾನಕಿ ಅವರ ಬಗ್ಗೆ ಹೇಳಬೇಕೆಂದರೆ ಮಹಾಸಾಗರದ ಆಳವನ್ನು ಅರಸ ಹೊರಟಂತೆ. ಅವರ ಹಾಡುಗಳ ಬಗ್ಗೆ ಹೇಳುವಾಗ ಈ ಕ್ಷಣಕ್ಕೆ ಬಂದ ನೆನಪುಗಳನ್ನು ಹೇಳಬಹುದೇ ವಿನಃ ಅವರು ಹಾಡಿರುವ ಶ್ರೇಷ್ಠ ಗೀತೆಗಳ ಒಂದು ಸಣ್ಣ ಅಳತೆಯನ್ನು ಕೂಡಾ ನಾವು ಕ್ರಮಿಸಲಾರೆ ವೇನೋ.

ಈಗ ಎಸ್ ಜಾನಕಿ ಸೊಂಟ ಮುರಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ..ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಸ್.ಜಾನಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿರುವ ಎಸ್. ಜಾನಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಬಿದ್ದು ಸೊಂಟ ಮುರಿದುಕೊಂಡಿದ್ದರು..ಎಸ್ ಜಾನಕಿ ಅವರಿಗೆ ಈಗ ಸುಮಾರು 80 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

Share This Article
Leave a Comment