ವಿಶ್ವಕಪ್ ನಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದ ಶಿಖರ್ ಧವನ್ ಗುರುವಾರ ಮೈದಾನಕ್ಕಿಳಿಯಲಿದ್ದಾರೆ. ಭಾರತದ ಪರ 130 ಪಂದ್ಯಗಳನ್ನಾಡಿರುವ 17 ಶತಕಗಳ ವೀರ ಧವನ್ ಮತ್ತೊಮ್ಮೆ ರೋಹಿತ್ ಶರ್ಮಾ ಜೊತೆ ಆರಂಭಿಕ ಬ್ಯಾಟ್ಸ್ ಮೆನ್ ಆಗಿ ಮೈದಾನಕ್ಕಿಳಿಯಲಿದ್ದಾರೆ. ಹಾಗಾಗಿ ಲೋಕೇಶ್ ರಾಹುಲ್, ನಾಲ್ಕನೇ ಸ್ಥಾನಕ್ಕೆ ಬರುವ ನಿರೀಕ್ಷೆಯಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿಯೇ ಮೈದಾನಕ್ಕಿಳಿಯಲಿದ್ದಾರೆ.ಕೇದಾರ್ ಜಾದವ್ ಐದನೇ ಅಥವಾ ಆರನೇ ಸ್ಥಾನದಲ್ಲಿ ಬ್ಯಾಟಿಂಗ್ ಗಿಳಿಯುವ ಸಾಧ್ಯತೆಯಿದೆ. ವೇಗದ ಬೌಲರ್ ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆಯಲಿದ್ದು, ನವದೀಪ್ ಸೈನಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯಕ್ಕೆ ಪದಾರ್ಪಣೆ ಮಾಡಲಿದ್ದಾರೆ.