ಗುಜರಾತ್ನ ಅಹಮದಾಬಾದ್’ನಲ್ಲಿ ಏರ್ ಇಂಡಿಯಾ ವಿಮಾನ ಪತನ
ಗುಜರಾತ್ನ ಅಹಮದಾಬಾದ್ನಲ್ಲಿ ಬೋಯಿಂಗ್ 787-8 ವಿಮಾನ ಪತನವಾಗಿದೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು ಎಂದು ಅಹಮದಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನ ಪತನವಾಗಿದೆ.
ಏರ್ ಇಂಡಿಯಾ ವಿಮಾನ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿತ್ತು. ಗಾಯಾಳುಗಳನ್ನು ಅಹಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಘಾನಿ ನಗರದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ, ವಿಮಾನದ ಹಿಂಭಾಗ ಮರಕ್ಕೆ ಡಿಕ್ಕಿ ಹೊಡೆದ 10 ನಿಮಿಷಗಳಲ್ಲಿ ವಿಮಾನ ಅಪಘಾತಕ್ಕೀಡಾಯಿತು. ಈ ವಿಮಾನದಲ್ಲಿ ಸುಮಾರು 242 ಜನರಿದ್ದರು