ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

tnit editors
0 Min Read

ಅಂಕೋಲಾ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು (ಗುಡ್ಡ ಕುಸಿದು ಇಂದಿಗೆ ಆರು ದಿನವಾಗಿದೆ. ನಿರಂತರ ಧಾರಾಕಾರ ಮಳೆಯಲ್ಲೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ಬೆಳಗಾವಿಯಿಂದ ಮಿಲಿಟರಿ ಪಡೆ ಕೂಡ ನೆರವಿಗೆ ದೌಡಾಯಿಸಿದೆ. ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

Share This Article