ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ.
ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ
ಗುತ್ತಿಗೆದಾರರ ಬಾಕಿ ಪಾವತಿಯಾಗದಿದ್ದರೆ ಮಾನ್ಯ ರಾಜ್ಯಪಾಲರನ್ನು ಭೇಟಿಮಾಡುವುದಾಗಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಂಬಂಧಪಟ್ಟ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
ಮೈಸೂರಿನ ಉದ್ಯೋಗ ಮೇಳ ಯಶಸ್ವಿಯಾಗಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ನಿನ್ನೆಯ ಉದ್ಯೋಗ ಮೇಳ ಯಶಸ್ವಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...