ಬೆಂಗಳೂರು: ಮದ್ದೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಪ್ರಸ್ತಾಪಿಸಿ ಡಿಕೆಶಿ ಭಾಷಣ ಮಾಡುತ್ತಿದ್ದರು. ಈ ವೇಳೆ ಈ ವೇಳೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಬರ್ತಿದೆಯೋ – ಇಲ್ವೋ? ಎಂದು ಪ್ರಶ್ನಿಸಿದಾಗ ಗೃಹಲಕ್ಷ್ಮಿ ಯೋಜನೆ ಹಣ ಬರ್ತಿಲ್ಲ, ಬರ್ತಿಲ್ಲ ಎಂದು ಮಹಿಳೆಯರು ಕೂಗಿದ ದೃಶ್ಯವೂ ಕಂಡುಬಂದಿತು. ಈ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದರು.