ಗೃಹಲಕ್ಷ್ಮಿ ಹಣದಲ್ಲಿ ಮಿರ್ಚಿ ಮಿಕ್ಸರ್ ಮಷಿನ್ ಖರೀದಿ ಮಾಡಿದ ಮಹಿಳೆ.!
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಸದುಪಯೋಗವನ್ನು ರಾಜ್ಯದ ಮಹಿಳೆಯರು ಪಡೆಯುತ್ತಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಈ ಹಣದಿಂದ ಸಾಕಷ್ಟು ಪ್ರಯೋಜನವಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು,
ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಅಂಗಡಿ ಹಾಕಿಕೊಟ್ಟಿರೋದು ಸೇರಿದಂತೆ ಇನ್ನಿತರ ಮಾದರಿ ಕಾರ್ಯಗಳನ್ನು ಮಾಡಿರುವುದು ನೀವು ಕೇಳಿರುತ್ತೀರಿ, ಇದೀಗ ಮಹಿಳೆಯೊಬ್ಬರು ಖಾರ ಪುಡಿ ಮಾಡುವ ಯಂತ್ರ ಖರಿದೀಸಿದ್ದಾರೆ. ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮದ ತಾಯವ್ವ ಲಕಮೋಜಿ ಖದೀಸಿದ ಯಂತ್ರವನ್ನು, ಆಕೆಯ ಕಿರು ಉದ್ದಿಮೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ಮಾಡಿದ್ದಾರೆ. ಗೃಹ ಲಕ್ಷ್ಮಿ ಹಣದಲ್ಲಿ ಅನೇಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದ್ದಾರೆ.