ಗೃಹಲಕ್ಷ್ಮಿ ಹಣ 3 ತಿಂಗಳಿಗೊಮ್ಮೆ ಅಷ್ಟೇ ಕೊಡ್ತೇವೆ: HM ರೇವಣ್ಣ
ಮೈಸೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ನೀಡಲು ಸರ್ಕಾರ ವಿಫಲವಾಗುತ್ತಿದೆ ಎಂಬ ಆರೋಪಗಳ ನಡುವೆ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. “ಪ್ರತಿ ತಿಂಗಳ ಹಣ ಕೊಡೋದು ಅಶಕ್ಯ, ಕೆಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳಿವೆ. ಆದ್ದರಿಂದ, ನಾವು ಪ್ರಸ್ತುತ ಮೂರು ತಿಂಗಳಿಗೊಮ್ಮೆ ಹಣ ನೀಡುತ್ತೇವೆ” ಎಂದು ಹೇಳಿದರು.
ಜಿಎಸ್ಟಿ ಸಮಸ್ಯೆಯಿಂದಾಗಿ 1.20 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ರೇವಣ್ಣ, ಇದರಲ್ಲಿ 58,000 ಮಂದಿ ಈಗ ಸಮಸ್ಯೆ ನಿವಾರಣೆಯಾಗಿದ್ದು, ಉಳಿದವರೂ ಶೀಘ್ರವೇ ಪರಿಹಾರ ಪಡೆಯಲಿದ್ದಾರೆ ಎಂದು ತಿಳಿಸಿದರು.
ಯೋಜನೆ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದವರು, “ನಾವು ಅಧಿಕಾರಕ್ಕೆ ಬಂದ ನಂತರ ಯಾವುದೇ ಸಮಯದಲ್ಲಿ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ತೊಂದರೆಗಳ ನಡುವೆ ಕ್ರಮಬದ್ಧವಾಗಿ ಹಣ ವಿತರಣೆ ಮಾಡುತ್ತಿದ್ದೇವೆ ಎಂದರು.