ಗೃಹ ಸಚಿವರಿಂದ ಸಿಟಿ ರೌಂಡ್ಸ್, ಹೇಗಿದೆ ನೋಡಿ ಬೆಂಗಳೂರು!

Date:

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಂದ ಬೆಂಗಳೂರು ಸಿಟಿ ರೌಂಡ್ಸ್ ನೆಡೆದಿದೆ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಪರಿಶೀಲಿಸಿದರು. ಸದಾ ಜನಜಂಗುಳಿ ಇರುವ ಕೆಆರ್ ಮಾರುಕಟ್ಟೆ ಪ್ರದೇಶಕ್ಕೆ ಮೊದಲು ಭೇಟಿ ಮಾಡಿ ಅಲ್ಲಿನ ವ್ಯವಸ್ಥೆ ಗಮನಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾಸ್ಕ್ ಧರಿಸದೆ ಇರುವುದನ್ನು ಗಮನಿಸಿದ ಸಚಿವರು, ಆ ಮಹಿಳೆಗೆ ಮಾಸ್ಕ್ ನೀಡಿ ಅದನ್ನು ಹಾಕಿಕೊಳ್ಳುವಂತೆ ಸಲಹೆ ನೀಡಿದರು.

 

 

ಮಾಸ್ಕ್ ಬಳಕೆ ಮಾಡಿ ಕೊರೊನಾದಿಂದ ದೂರ ಇರುವಂತೆ ಬಳಕೆ ಆ ಮಹಿಳೆಗೆ ಸಚಿವರು ಮನವರಿಕೆ ಮಾಡಿಕೊಟ್ಟರು. ನಂತರ ಚಾಮರಾಜಪೇಟೆ, ಸೌತ್ ಎಂಡ್ ಸರ್ಕಲ್ ಮುಂತಾದ ಪ್ರದೇಶಗಳಿಗೆ ಸಚಿವ ಬೊಮ್ಮಾಯಿ ಅವರು ಭೇಟಿ ನೀಡಿ ಕರ್ಫ್ಯೂ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲಪಂತ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...