No menu items!
11.1 C
Munich
Wednesday, April 29, 2026

ಗೆದ್ದ ಖುಷಿಯಲ್ಲಿದ್ದ ಟೀಮ್ ಇಂಡಿಯಾಕ್ಕೆ ಶಾಕ್

Must read

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದ ಭಾರತ, ಪ್ರವಾಸಿ ಇಂಗ್ಲೆಂಡ್‌ ತಂಡವನ್ನು 164 ರನ್‌ಗಳಿಗೆ ನಿಯಂತ್ರಿಸಿತ್ತು. ಬಳಿಕ ಗುರಿ ಹಿಂಬಾಲಿಸಿದ ಟೀಮ್‌ ಇಂಡಿಯಾ 17.5 ಓವರ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. ಆ ಮೂಲಕ 7 ವಿಕೆಟ್‌ಗಳಿಂದ ಸುಲಭ ಗೆಲುವು ಪಡೆದ ಕೊಹ್ಲಿ ಪಡೆ, ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿತು.

“ತಾವು ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದನ್ನು ನಾಯಕ ವಿರಾಟ್‌ ಕೊಹ್ಲಿ ಒಪ್ಪಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಔಪಚಾರಿಕ ವಿಚಾರಣೆ ಇರುವುದಿಲ್ಲ,” ಎಂದು ಹೇಳಿಕೆಯಲ್ಲಿ ಐಸಿಸಿ ಉಲ್ಲೇಖಿಸಿದೆ.

ಆನ್-ಫೀಲ್ಡ್ ಅಂಪೈರ್‌ಗಳಾದ ಅನಿಲ್ ಚೌಧರಿ ಮತ್ತು ಕೆ.ಎನ್. ಅನಂತಪದ್ಮನಾಭನ್ ಹಾಗೂ ಮೂರನೇ ಅಂಪೈರ್ ವೀರೇಂದ್ರ ಶರ್ಮಾ ಅವರು ನಿಧಾನಗತಿಯ ಬೌಲಿಂಗ್‌ ಆರೋಪವನ್ನು ಟೀಮ್‌ ಇಂಡಿಯಾ ಮೇಲೆ ಹೊರಿಸಿದ್ದರು. ಇನ್ನು ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದು ಬೀಗಿತ್ತು.

ಎರಡು ಪಂದ್ಯಗಳ ಅಂತ್ಯಕ್ಕೆ 5 ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿರುವ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಮಾ.16 ರಂದು ಇದೇ ಅಂಗಣದಲ್ಲಿ ಮೂರನೇ ಹಣಾಹಣಿಯಲ್ಲಿ ಕಾದಾಟ ನಡೆಸಲಿವೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article