ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಗೆಲುವು ಖಚಿತವಾಗಿರುವ ಹಿನ್ನೆಲೆಯಲ್ಲಿ ಡಿನ್ನರ್ ಪಾರ್ಟಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯ ಕಾಂಗ್ರೆಸ್ ಮುಖಂಡರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರೊಂದಿಗೆ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅವರು ಶೇ. 100 ರಷ್ಟು ಗೆಲುವು ಸಾಧಿಸಲಿದ್ದಾರೆ. ಹಾಗಾಗಿಯೇ ಡಿನ್ನರ್ ಪಾರ್ಟಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಮೇ 23 ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜಕೀಯದಲ್ಲಿ ಏನೇನು ಏರುಪೇರು ಆಗಲಿದೆ ಎಂಬುದನ್ನು ಕಾದು ನೋಡೋಣ. ಮೈಸೂರಿನಲ್ಲಿ ಜೆಡಿಎಸ್ ಮತಗಳು ಬಿಜೆಪಿಗೆ ಬಂದಿವೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿರುವುದು ನಿಜ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.