‘ಗೆಲ್ಲಿಸದಿದ್ದರೆ ನನಗೆ ಮುಖ ತೋರಿಸಬೇಡಿ’ ಸಿದ್ದರಾಮಯ್ಯ!

admin
By admin
1 Min Read

ಕೊಪ್ಪಳ ಲೋಕಸಭೆ ಕ್ಷೇತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಏಪ್ರಿಲ್ 4 ರಂದು ಸಮಾವೇಶ ಮುಗಿದ ಬಳಿಕ ಕಾಂಗ್ರೆಸ್ ನಾಯಕರೊಂದಿಗೆ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಗೆಲ್ಲಿಸುವಂತೆ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ನಾಯಕರೊಂದಿಗೆ ಗೆಲುವಿನ ಕಾರ್ಯತಂತ್ರ ಕುರಿತಾಗಿ ಚರ್ಚಿಸಿದ ಅವರು, ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.

ಅಭ್ಯರ್ಥಿ ಗೆಲ್ಲಿಸದಿದ್ದರೆ ನನಗೆ ಮುಖ ತೋರಿಸಬೇಡಿ ಎಂದು ವಾರ್ನಿಂಗ್ ಮಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಸಭೆ ನಡೆಸಿದ ಸಿದ್ದರಾಮಯ್ಯ, ಕೊಪ್ಪಳ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇಬೇಕು.

ಇಲ್ಲದಿದ್ದರೆ, ನನಗೆ ಮುಖ ತೋರಿಸಬೇಡಿ ಎಂದು ಹೇಳಿದ್ದಾರೆನ್ನಲಾಗಿದೆ. ಈ ಮಹತ್ವದ ಸಭೆಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಗೈರು ಹಾಜರಾಗಿದ್ದು, ಅವರ ನಡೆ ಅನುಮಾನ ಮೂಡಿಸಿದೆ ಎಂದು ಹೇಳಲಾಗಿದೆ.

Share This Article