ಬೆಂಗಳೂರು: ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.
ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಸೋಲಾಯಿತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ,
ರಾಜಕೀಯದಲ್ಲಿ ತಂತ್ರ ಕುತಂತ್ರ ಕೆಲಸ ಮಾಡುತ್ತದೆ. ಅದನ್ನೇ ಮಾಡಿದ್ದಾರೆ. ನಾನು ಕಾರ್ಯಕರ್ತರ ಜೊತೆ ಇದ್ದವನು. ಈಗಲೂ ಅವರ ಜತೆ ಇರುತ್ತೇನೆ. ನನ್ನ ಹೋರಾಟ ಮುಂದುವರಿಯಲಿದೆ. ಆದಾಗ್ಯೂ ದೇಶದಲ್ಲಿ ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ಸಂಖ್ಯೆ ಬಂದಿದೆ ಎಂದು ಅವರು ಹೇಳಿದರು. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿತ್ತು. ಮಾಧ್ಯಮಗಳ ಸಮೀಕ್ಷೆಗಳೂ ಹಾಗೆ ಹೇಳಿದ್ದವು. ಆದರೆ, ಅವುಗಳೆಲ್ಲ ಸುಳ್ಳಾಗಿವೆ ಎಂದು ಸುರೇಶ್ ಹೇಳಿದರು.
ಗೆಲ್ಲುವ ವಿಶ್ವಾಶ ಇತ್ತು ಆದ್ರೆ ನಾನು ಸೋಲನ್ನು ಸ್ವೀಕರಿಸಿದ್ದೇನೆ: ಡಿಕೆ ಸುರೇಶ್
Date: