ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಬಾಲಪ್ಪ ಅರೆಸ್ಟ್

Date:

ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಬಾಲಪ್ಪ ಅರೆಸ್ಟ್

ಕನ್ನಡದ ಮುದ್ದುಲಕ್ಷ್ಮಿ‌ ಸೀರಿಯಲ್‌ನಲ್ಲಿ ಅಷ್ಟೇ ಅಲ್ಲ ತೆಲುಗು ಕಿರುತೆರೆಯ ಅನೇಕ ಧಾರಾವಾಹಿಗಳಲ್ಲೂ ನಟಿಸಿದ್ದ ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಆರ್‌.ಆರ್ ನಗರ ಪೊಲೀಸರು ಚರಿತ್ ಬಾಲಪ್ಪ ಅವರನ್ನ ಅರೆಸ್ಟ್‌ ಮಾಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಪ್ರೀತಿಸುತ್ತಿದ್ದೇನೆ, ಮದುವೆ ಆಗ್ತೀನಿ ಅಂತ ಹೇಳಿ ನಟ ಚರಿತ್ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಅಷ್ಟೇ ಅಲ್ಲದೇ ನಟ ಚರಿತ್ ಬಾಳಪ್ಪ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರೋ ಆರೋಪ ಕೇಳಿ ಬಂದಿದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ನಟ ಚರಿತ್ ವಿರುದ್ಧ ಯುವತಿ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು ಬೆಂಗಳೂರು:...

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್...

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ ಚಾಮರಾಜನಗರ: ರಾತ್ರಿ...

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ ಬಾಗಲಕೋಟೆ: ಬೆಂಗಳೂರಿನಿಂದ ರಾಜಸ್ಥಾನದ...