No menu items!
3.9 C
Munich
Wednesday, September 23, 2026

ಗೆಳೆಯನಿಗೆ ಚಾಕು ಇರಿದು ನಾಟಕವಾಡಿದ್ದ ವ್ಯಕ್ತಿ..! ತನಿಖೆ ವೇಳೆ ಅಸಲಿ ಸಂಗತಿ ಬಯಲು

Must read

ಬೆಂಗಳೂರು: ಕುಡಿದ ಮತ್ತಿನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ. ಗೆಳೆಯನಿಗೆ ಚಾಕು ಇರಿದು ನಾಟಕವಾಡಿದ್ದ ವ್ಯಕ್ತಿ ಬಂಧನವಾಗಿದ್ದು ಮಾದೇಶ್ ಬಂಧಿತ ಆರೋಪಿಯಾಗಿದ್ದಾನೆ. ಸ್ನೇಹಿತ ರಾಜಕುಮಾರ್ ಗೆ ಚಾಕು ಇರಿದಿದ್ದ ಆರೋಪಿಯಾಗಿದ್ದು ಇದೇ ತಿಂಗಳ 5ರಂದು ಕೆಂಗೇರಿಯಲ್ಲಿ ನಡೆದಿದ್ದ ಕೊಲೆಯಾಗಿದ್ದು ವೃತ್ತಿಯಲ್ಲಿ ಇಬ್ಬರು ಕ್ಯಾಬ್ ಚಾಲಕರಾಗಿದ್ದರು.
ಎಣ್ಣೆ ಹೊಡೆಯಲೆಂದು ಮೀಟ್ ಆಗಿದ್ದ ಇಬ್ಬರು ಅಂಗಡಿಯಲ್ಲಿ ಎಣ್ಣೆ ಖರೀದಿಸಿ ನಿರ್ಜನ ಪ್ರದೇಶಕ್ಕೆ ತೆರಳಿ ಮದ್ಯ ಸೇವನೆ.. ಈ ವೇಳೆ ಶುರುವಾದ ಜಗಳದಲ್ಲಿ ಮಾತಿಗೆ ಮಾತು ಬೆಳೆದಿತ್ತು ಮಾದೇಶನ ಕುಟುಂಬ ಹಾಗೂ ಮಕ್ಕಳ ಬಗ್ಗೆ ನಿಂದಿಸಿದ್ದ ರಾಜಕುಮಾರ್..


ಈ ವೇಳೆ ತನ್ನ ಕಾರ್ ನಲ್ಲಿದ್ದ ಚಾಕುವಿನಿಂದ ಎದೆ ಭಾಗಕ್ಕೆ ಇರಿತ.. ಚಾಕುವಿನಿಂದ ಚುಚ್ಚಿ ತಾನೇ ಆಸ್ಪತ್ರೆಗೆ ಕರೆದೊಯ್ದ ಮಾದೇಶ್ ಈ ವೇಳೆ ಸಂಬಂಧಿಕರಿಗೆ ಯಾರೋ ಅಪರಿಚಿತರು ಕೃತ್ಯ ಎಸಗಿದ್ದಾಗಿ ಹೇಳಿದ್ದ ಆಸ್ಪತ್ರೆ ಬಳಿ ಆತನ ಸಾವಿನ ಸುದ್ದಿ ಏಳುತಿದ್ದಂತೆ ಪರಾರಿಯಾಗಿದ್ದ ಮಾದೇಶ..
ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕೆಂಗೇರಿ ಪೊಲೀಸರು ತನಿಖೆ ವೇಳೆ ಅಸಲಿ ಸಂಗತಿ ಬಯಲು.. ನಾಪತ್ತೆಯಾಗಿದ್ದ ಮಾದೇಶನ ಬಂಧಿಸಿದ ಕೆಂಗೇರಿ ಪೊಲೀಸರು.. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ,ತನಿಖೆ ಚುರುಕುಗೊಂಡಿದೆ.

- Advertisement -spot_img

More articles

- Advertisement -spot_img

Latest article