ಬೆಳಗಾವಿ: ಗ್ಯಾರಂಟಿ ಮೂಲಕ ರಾಮರಾಜ್ಯ ನಿರ್ಮಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನಾನು ಕೂಡ ರಾಮನ ಭಕ್ತಳು. ರಾಮ ರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರ್ಕಾರ ನಡೆಯುತ್ತಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಇದನ್ನು ಪಾಲಿಸುತ್ತಿದೆ. ನಾವು ಈಗಾಗಲೇ ರಸ್ತೆ, ಬ್ರಿಡ್ಜ್, ಶಾಲೆ ಸಾಕಷ್ಟು ನಿರ್ಮಿಸಿದ್ದೇವೆ.
ಗ್ಯಾರಂಟಿ ಮೂಲಕ ರಾಮರಾಜ್ಯ ನಿರ್ಮಿಸುತ್ತಿದ್ದೇವೆ ಎಂದರು. ನೆಮ್ಮದಿಯಿಂದ ಜೀವನ ಮಾಡುವುದೇ ರಾಮರಾಜ್ಯ. ನಮ್ಮ ಸರ್ಕಾರ, ಸಿದ್ದರಾಮಯ್ಯನವರ ಮುಖಂಡತ್ವದಲ್ಲಿ ಚಾಚೂ ತಪ್ಪದೇ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತ್ತಿದೆ. ಮನೆ, ಮನೆಯಲ್ಲಿ ರಾಮರಾಜ್ಯ ನಿರ್ಮಾಣ ಮಾಡಬೇಕೆನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.