ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಪ್ರಲ್ಹಾದ್ ಜೋಶಿ
ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಳ್ಳು ಹೇಳುವುದದರಲ್ಲಿ ಕಾಂಗ್ರೆಸ್ಸಿಗರೇ ನಿಸ್ಸೀಮರು. ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ರಾಜ್ಯ ಸರ್ಕಾರದ್ದು ಎಲ್ಲಾ ಬೋಗಸ್ ಗ್ಯಾರೆಂಟಿಗಳು ಎಂದು ಆರೋಪಿಸಿದ್ದಾರೆ.
ಈ ಸರ್ಕಾರ ಒಂದೆಡೆ ಕೊಟ್ಟು, ಮತ್ತೊಂದಲ್ಲಿ ಅದರ ಹತ್ತರಷ್ಟು ಕಿತ್ತುಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ, ವಿದ್ಯುತ್ ದರ, ಹಾಲಿನ ದರ, ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ರೈತರ ಪಹಣಿ ಶುಲ್ಕ ಹೀಗೆ ಎಲ್ಲದರಲ್ಲೂ ಬೆಲೆ ಏರಿಕೆ ಹೊರೆ ಹೊರಿಸಿದೆ ಎಂದು ಆರೋಪಿಸಿದರು.