ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಎಂದು ತೀರ್ಮಾನ ಮಾಡಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ನಾವು ಗ್ಯಾರಂಟಿ ಯೋಜನೆಗಳನ್ನು ಕೊಡುವುದಕ್ಕೂ ಮೊದಲು ಬಹಳಷ್ಟು ಚರ್ಚೆ ಮಾಡಿದ್ದೇವೆ. ನಮ್ಮ ಉದ್ದೇಶ ಇರುವುದು ಬಡತನ ನಿರ್ಮೂಲನೆ. ಈ ಉದ್ದೇಶದಲ್ಲಿ ಹೊಂದಾಣಿಕೆಯಾಗಲ್ಲ. ಹಳ್ಳಿಗಳಲ್ಲಿ ಕೃಷಿ ಕೂಲಿ ಕಾರ್ಮಿಕರು ಬಹಳ ತೊಂದರೆಯಲ್ಲಿದ್ದಾರೆ. ನೋಟು ಬದಲಾವಣೆ, ಜಿಎಸ್ಟಿ ಜಾರಿಯಾದ ನಂತರ ಬಡತನದ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಬಡ ಜನರಿಗೆ ಏನಾದರೂ ಮಾಡಬೇಕು ಎಂಬ ಉದ್ದೇಶದಿಂದ ಪ್ರಣಾಳಿಕೆಯ ಅಧ್ಯಕ್ಷನಾಗಿ ಚರ್ಚೆ ಮಾಡಿ, ಗ್ಯಾರಂಟಿ ಯೋಜನೆಗಳ ತೀರ್ಮಾನ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಎಂದು ತೀರ್ಮಾನ ಮಾಡಿಕೊಂಡಿದ್ದೇವೆ. ಯಾರು ಏನೇ ಹೇಳಿದರೂ ಸಹ ಈಗಾಗಲೇ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಸ್ಟಾಪ್ ? ಡಾ.ಜಿ.ಪರಮೇಶ್ವರ್ ಹೇಳಿದ್ದೇನು
Date: