ಗ್ಯಾಸ್ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು! ಸಾವಿನ ಸಂಖ್ಯೆ 3 ಕ್ಕೇರಿಕೆ.!

Date:

ಗ್ಯಾಸ್ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು! ಸಾವಿನ ಸಂಖ್ಯೆ 3 ಕ್ಕೇರಿಕೆ.!

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಅದರಲ್ಲಿ ಇಬ್ಬರು ನಿನ್ನೆ ಸಾವನ್ನಪಿದ್ರೆ, ಇವತ್ತು ಮತ್ತೊಬ್ಬ ಮಾಲಾಧಾರಿ ಸಾವನ್ನಪ್ಪಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಡಿಸೆಂಬರ್ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್ಗೆ ದಾಖಲಾಖಲಿಸಲಾಗಿತ್ತು. ಈಗವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು (ಡಿ.27) ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ. 58 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್ ಸವದತ್ತಿ, 16 ವರ್ಷದ ರಾಜು ಮೂಗೇರಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಲಾಧಾರಿಗಳು ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಅಯ್ಯಪ್ಪನ ಮಾಲೆಯನ್ನು ತಗೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...