ಗ್ಯಾಸ್ ಸಿಲಿಂಡರ್ ಸ್ಫೋಟ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಹುಬ್ಬಳ್ಳಿ: ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತ ಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ನಿಧನರಾಗಿದ್ದಾರೆ. ಇನ್ನೂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ರಾತ್ರಿ ಊಟ ಮುಗಿಸಿಕೊಂಡು ಸಣ್ಣ ಕೋಣೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದ್ದು ಈ ದುರ್ಘಟನೆಯಲ್ಲಿ 9 ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.