ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

Date:

ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಶಾಸಕರಿಗೆ ವಿದೇಶ ಪ್ರವಾಸ ಅವಕಾಶ ನೀಡಿದ ಮುಖ್ಯಮಂತ್ರಿ ಆರೋಗ್ಯ ಸಚಿವರನ್ನೂ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಕಳುಹಿಸಿದರೆ ಬಡವರ ಪರಿಸ್ಥಿತಿ ಏನಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗಿದೆ ಎಂದು ಆರೋಪಿಸಿದರು. ಅನೇಕ ಕಡೆ ಶಸ್ತ್ರಚಿಕಿತ್ಸೆಗಳು ಮುಂದೂಡಲಾಗುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ ಎಂದರು. ಆರೋಗ್ಯ ಇಲಾಖೆ ಸಚಿವರು ಮತ್ತು ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಗಮನ ಹರಿಸಿಲ್ಲ ಎಂದು ಟೀಕಿಸಿದರು.

ಸಚಿವರು ಹಾಗೂ ಶಾಸಕರನ್ನು ವಿದೇಶಕ್ಕೆ ಕಳುಹಿಸುವ ಮುನ್ನ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲಾರದೆ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳಿಗೂ ಅಡ್ಡಿಪಡಿಸಿದೆ ಎಂದು ವಿಜಯೇಂದ್ರ ಆರೋಪಿಸಿದರು. ಗ್ರಾಮೀಣ ಭಾಗದಲ್ಲಿ ಕೃತಕವಾಗಿ ಔಷಧಿ ಕೊರತೆ ಸೃಷ್ಟಿಸಿ, ಟೆಂಡರ್ ಕರೆಯದೇ ತುರ್ತು ಖರೀದಿ ಹೆಸರಿನಲ್ಲಿ ಅಕ್ರಮ ನಡೆಯುತ್ತಿದೆಯೇ ಎಂಬ ಅನುಮಾನ ಜನರಲ್ಲಿ ಮೂಡಿದೆ ಎಂದರು.

Share post:

Subscribe

spot_imgspot_img

Popular

More like this
Related

ಜನರನ್ನು ಕೈಯೊಡ್ಡುವ ಸ್ಥಿತಿಗೆ ದೂಡಲಾಗಿದೆ: ಎಚ್.ಡಿ. ಕುಮಾರಸ್ವಾಮಿ ಬೇಸರ

ಜನರನ್ನು ಕೈಯೊಡ್ಡುವ ಸ್ಥಿತಿಗೆ ದೂಡಲಾಗಿದೆ: ಎಚ್.ಡಿ. ಕುಮಾರಸ್ವಾಮಿ ಬೇಸರ ಚಿಕ್ಕನಾಯಕನಹಳ್ಳಿ: ರಾಜ್ಯದ ಜನರಿಗೆ...

ಸೌದಿ ಅರೇಬಿಯಾದಲ್ಲಿ JZ ಗ್ರೀನ್ ಹೆವನ್: ಐಷಾರಾಮಿ ವಾಸ್ತವ್ಯದ ಹೊಸ ಅಧ್ಯಾಯ

ಸೌದಿ ಅರೇಬಿಯಾದಲ್ಲಿ JZ ಗ್ರೀನ್ ಹೆವನ್: ಐಷಾರಾಮಿ ವಾಸ್ತವ್ಯದ ಹೊಸ ಅಧ್ಯಾಯ ರಿಯಾದ್:...

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಧಾರವಾಡ:...

ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು

ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು ಬೆಂಗಳೂರು: ಬೆಂಗಳೂರು ಸೇರಿದಂತೆ...