ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 21 ರಿಂದ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಯಾವ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡುತ್ತಾರೆ ಎನ್ನುವುದನ್ನು ತಿಳಿಸಿಲ್ಲ.
ಗ್ರಾಮ ವಾಸ್ತವ್ಯದ ಕುರಿತು ಸಿಎಂ ಕುಮಾರಸ್ವಾಮಿ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಂದ ವರದಿ ಪಡೆದುಕೊಂಡಿರುವ ಸಿಎಂ ಎಲ್ಲಿ ಹೆಚ್ಚಿನ ಸಮಸ್ಯೆ ಇದೆಯೋ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.

ಯಾವ ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು ಎನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಸಿಎಂ, ಗ್ರಾಮಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿದು, ಹೆಚ್ಚಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯದ ಮಾಡಲಿರುವ ಗ್ರಾಮದ ಬಗ್ಗೆ ಮೊದಲೇ ಹೇಳಿದಲ್ಲಿ ಅಧಿಕಾರಿಗಳು ಆ ಗ್ರಾಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ.ಹಾಗಾಗಿ ಗ್ರಾಮದ ಹೆಸರನ್ನು ಸಿಎಂ ಬಹಿರಂಗಪಡಿಸುತ್ತಿಲ್ಲ ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜನರಿಂದ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಂಡಿದ್ದಾರೆ. ಸಿಎಂ ಗ್ರಾಮ ವಾಸ್ತವ್ಯದ ತಾಲ್ಲೂಕುಗಳ ಬಗ್ಗೆ ಮಾತ್ರ ಮಾಹಿತಿ ನೀಡಿದ್ದು, ಯಾವ ಗ್ರಾಮ ಎಂಬುದರ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ.






