ಗ್ರಾಹಕರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ: ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

Date:

ಗ್ರಾಹಕರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ: ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

ಈ ವಾರ ಸ್ವಲ್ಪ ಬಂಗಾರದ ಬೆಲೆ ಇಳಿಕೆ ಕಂಡಿದ್ದು, ಸ್ವಲ್ಪನಾದ್ರೂ ಖರೀದಿ ಮಾಡಬಹುದು ಎಂಬ ಆಸೆ ಗ್ರಾಹಕರಲ್ಲಿ ಹುಟ್ಟಿದೆ. ಅದರಲ್ಲೂ ಮದುವೆ ಸೀಸನ್, ಹೀಗಾಗಿ ಬಂಗಾರ-ಬೆಳ್ಳಿ ಖರೀದಿ ಜೋರಾಗಿದೆ. ದಿನೇ ದಿನೇ ಬಂಗಾರದ ಬೆಲೆ ಏರುತ್ತಿರುವುದು ಹಲವರಿಗೆ ತಲೆನೋವಾಗಿ ಪರಿಣಮಿಸಿದೆ. ಸ್ಥಳೀಯವಾಗಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರ ಬೇಡಿಕೆಯ ಹಿನ್ನೆಲೆ ಮತ್ತು ಅಂತಾರಾಷ್ಟ್ರೀಯ ವಿದ್ಯಮಾನಗಳಿಂದ ಚಿನ್ನದ ದರ ಏರುತ್ತಿದೆ.
ಚಿನ್ನದ ಬೆಲೆ ಈ ವಾರ ಇಳಿಕೆಯೊಂದಿಗೆ ಆರಂಭ ಕಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 8,955 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 9,769 ರೂಗೆ ಕುಸಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 107 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕೆಲ ಕಡೆ ಬೆಳ್ಳಿ ಬೆಲೆ 118 ರೂನಿಂದ 117 ರೂಗೆ ಇಳಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,700 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,270 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...