ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ನಿಲ್ತೇನೆ ಅಂತ ಹೇಳಿಲ್ಲ. ಇದು ಕುಮಾರಣ್ಣ ಅವರ ಸ್ವಕ್ಷೇತ್ರ ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಯಾವುದೇ ರೀತಿಯ ತೀರ್ಮಾನ ತಗೊಳ್ಳಿ ಅಂತ ಹೇಳಿದ್ದಾರೆ. ಆದರೂ ಮೈತ್ರಿಗೆ ತೊಂದರೆ ಆಗಬಾರದು ಅಂತ ನಾವಿದೀವಿ ಎಂದರು
ನಮ್ಮ ತೀರ್ಮಾನ ಏನೇ ಇದ್ರೂ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತಗೋತೀವಿ.ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇದಕ್ಕೆ ಕಾರಣ ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಬೇಕು ಅಂತ.ಒಬ್ಬ ವ್ಯಕ್ತಿಯ ನಡವಳಿಕೆ ನೋಡಿ ನಾವು ಯಾವುದೇ ರೀತಿಯ ಆತುರದ ನಿರ್ಧಾರ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೇವೇಗೌಡರು, ಕುಮಾರಣ್ಣ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡ್ತೀವಿ.ನಾನು ಅಭ್ಯರ್ಥಿ ಅಂತ ಎಂದೂ ವೈಯಕ್ತಿಕವಾಗಿ ಹೇಳಿಲ್ಲ. ನನ್ನ ಜವಾಬ್ದಾರಿ ನಿಭಾಯಿಸ್ತಿದ್ದೇನೆ ಕ್ಷೇತ್ರದಲ್ಲಿ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ಮಾಡ್ತೀವಿ.ಎರಡು ಮೂರು ದಿನಗಳ ಹಿಂದೆ ಯೋಗೀಶ್ವರ್ ಜತೆ ನಮ್ಮ ಹಿರಿಯ ಮುಖಂಡರು ಚರ್ಚೆ ಮಾಡಿದ್ರು. ಜೆಡಿಎಸ್ ಚಿನ್ಹೆಯಡಿಯೂ ಸ್ಪರ್ಧೆಗೆ ಆಫರ್ ಕೊಟ್ರು. ಈ ಆಫರ್ ಗೆ ಅವರು ಕುಮಾರಸ್ವಾಮಿ ಅವರನ್ನೂ ಕೇಳಿರಲಿಲ್ಲ. ಇದನ್ನು ನಮ್ಮ ಮುಖಂಡರೇ ನನಗೆ ಹೇಳಿದ್ದರು ಎಂದು ತಿಳಿಸಿದರು.