ಚನ್ನಪಟ್ಟಣ ಕುರುಕ್ಷೇತ್ರ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ !
ಬೆಂಗಳೂರು: ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಇದರಂತೆ ನಿಖಿಲ್ ಕುಮಾರಸ್ವಾಮಿಯವರು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಾಮಪತ್ರ ಸಲ್ಲಿಸಿದ್ದಾರೆ.
ಹೌದು ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ಜೊತೆಗೆ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದು, ಬಳಿಕ ಚನ್ನಪಟ್ಟಣದ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದರು.